KSRTC ಚಾಲನಾ ಸಿಬ್ಬಂದಿ ನೇಮಕಾತಿಗೆ ಗ್ರೀನ್ ಸಿಗ್ನಲ್; 

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆ ಜಾರಿ ನಂತರ KSRTC ಬಲವೂ ಹೆಚ್ಚಿದೆ. ಸಂಸ್ಥೆಯ ಆದಾಯವೂ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಹೆಚ್ಚುವರಿ ಬಸ್ ಸೇರ್ಪಡೆಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದೇ ತಡ, ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿ ನೇಮಕಾತಿಗೂ ಹಸಿರು ನಿಶಾನೆ ಸಿಕ್ಕಿದೆ.

ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ 8 ವರ್ಷಗಳಿಂದ ಅಂದರೆ 2016 ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ 4 ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು.

ಈ ಬಗ್ಗೆ 13,000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು. ಅದರಂತೆ ಮೊದಲ ಹಂತದಲ್ಲಿ 6500 ಚಾಲನಾ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ.

ಸಂಸ್ಥೆವಾರು ನೇಮಕಾತಿ ವಿವರ ಹೀಗಿದೆ: .

  • KSRTC: ಡ್ರೈವರ್ ಕಮ್ ಕಂಡಕ್ಟರ್: 2000,

  • KSRTC: ತಾಂತ್ರಿಕ ಸಿಬ್ಬಂದಿ : 300

  • NWKRTC: ಡ್ರೈವರ್ ಕಮ್ ಕಂಡಕ್ಟರ್ 2000

  • BMTC : ಕಂಡಕ್ಟರ್ 2500

KKRTCಯಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿ ನೇಮಕಾತಿ‌ ಪ್ರಕ್ರಿಯೆ ‌ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುವುದು. ಹಾಗೂ
KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ. ಒಟ್ಟಾರೆ 8719 ಚಾಲನಾ‌ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರೆತಿದೆ ಎಂದು KSRTC ಮೂಲಗಳು ತಿಳಿಸಿವೆ.

You may have missed