ಹೆಚ್ಡಿಕೆ Vs ಸಿದ್ದು: ‘ಪೆನ್‌ಡ್ರೈವ್ ಬಹಿರಂಗಗೊಳಿಸಬೇಡಿ’ ಎಂದವರು ಯಾರು?’

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗೆಗಿನ ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಹೆಚ್ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ ಅದರ ಬಗ್ಗೆ ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ ಎಂದು ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ. ಅಡಿಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದವರು ಹೇಳಿದ್ದಾರೆ.‌

You may have missed