ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಇದೇನಾ ಬ್ರ್ಯಾಂಡ್ ಬೆಂಗಳೂರು?
ಬೆಂಗಳೂರು: ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಜನರು ಪರದಾಡುವಂತಾಗಿದೆ. ಸೋಮವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ಜನಜೀವನ ಏರುಪೇರಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದಾಗಿ ಬೆಳಿಗ್ಗೆ ಕೆಲಸಕ್ಕೆಂದು ತೆರಳಿದ ಮಂದಿ ಸಂಕಷ್ಟ ಅನುಭವಿಸುವಂತಾಯಿತು.
ರಾಜಧಾನಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹಾಗೂ ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಯಿಂದಾಗಿ ಮಳೆ ಸಂದರ್ಭಗಳಲ್ಲಿ ಆಗಾಗ್ಗೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಈ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾ ದಳ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..? ಎಂದು ಜೆಡಿಎಸ್ ಪ್ರಶ್ನಿಸಿದೆ.
ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..?
ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..!
ಡಿಸಿಎಂ @DKShivakumar ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು..? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ…
ಕೇವಲ 3-4 ಗಂಟೆ ಸುರಿದ ಮಳೆಗೆ ಬೆಂಗಳೂರು ಬಹುತೇಕ ಜಲಾವೃತವಾಗಿದೆ. ರಾಜಧಾನಿಯ ಹಲವೆಡೆ ಮನೆಗಳಿಗೆ, ಅಪಾರ್ಟ್ ಮೆಂಟ್ ಗಳಿಗೆ… pic.twitter.com/7nuVWQMip2
— Janata Dal Secular (@JanataDal_S) August 12, 2024
ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್, ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು..? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ ಎಂದು ಪ್ರಶ್ನಿಸಿದೆ.
ಕೇವಲ 3-4 ಗಂಟೆ ಸುರಿದ ಮಳೆಗೆ ಬೆಂಗಳೂರು ಬಹುತೇಕ ಜಲಾವೃತವಾಗಿದೆ. ರಾಜಧಾನಿಯ ಹಲವೆಡೆ ಮನೆಗಳಿಗೆ, ಅಪಾರ್ಟ್ ಮೆಂಟ್ ಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತಿದ್ದಾರೆ. ಇನ್ನು ಸಿಲಿಕಾನ್ ಸಿಟಿಯ ಬಹುತೇಕ ರಸ್ತೆಗಳು, ಅಂಡರ್ ಪಾಸ್ಗಳು ಸ್ವಿಮ್ಮಿಂಗ್ ಪೂಲ್ ಆಗಿದೆ, ರಸ್ತೆಗಳು ಕರೆಯಂತಾಗಿದ್ದು, ಹಳ್ಳ, ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಚಲಿಸುವುದು ವಾಹನ ಸವಾರರಿಗೆ ನರಕ ಸದೃಶ್ಯವಾಗಿದೆ.ಬೆಂಗಳೂರು ನಗರಾಭಿವೃದ್ಧಿ ಸಚಿವರೇ ಆಸ್ತಿ ತೆರಿಗೆ ಏರಿಸಿ, ಸಾವಿರ ಕೋಟಿಗೂ ಹೆಚ್ಚು ಸಂಗ್ರಹಿಸಿರುವ ಹಣ ಏನಾಗಿದೆ..? ಎಂದು ಜೆಡಿಎಸ್ ಪಕ್ಷ ಡಿಸಿಎಂ ಡಿಕೆಶಿ ಅವರನ್ನು ಕೇಳಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡಲು ನೀವು ತೋರಿದ ಉತ್ಸಾಹ, ಈಗ ” ಬ್ರ್ಯಾಂಡ್ ಬೆಂಗಳೂರು” ಮಾಡ್ತೀವಿ ಎಂದು ಬರೀ ಸುಳ್ಳುಗಳನ್ನು ಹೇಳುತ್ತಲೇ ಬೆಂಗಳೂರಿನ ಜನರಿಗೆ ಮಂಕುಬೂದಿ ಎರಚುತ್ತಿದ್ದೀರಿ ಅಷ್ಟೇ.. ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲೇ ಮುಳುಗಿರುವಾಗ ಜನಸಮಾನ್ಯರ ಬಗ್ಗೆ ಯೋಚಿಸಲು ಸಮಯ ಎಲ್ಲಿದೆ..?ಎಂದು ಜೆಡಿಎಸ್ ಲೇವಡಿ ಮಾಡಿದೆ.
ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..?
ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..!
ಡಿಸಿಎಂ @DKShivakumar ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು..? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ…
ಕೇವಲ 3-4 ಗಂಟೆ ಸುರಿದ ಮಳೆಗೆ ಬೆಂಗಳೂರು ಬಹುತೇಕ ಜಲಾವೃತವಾಗಿದೆ. ರಾಜಧಾನಿಯ ಹಲವೆಡೆ ಮನೆಗಳಿಗೆ, ಅಪಾರ್ಟ್ ಮೆಂಟ್ ಗಳಿಗೆ… pic.twitter.com/7nuVWQMip2
— Janata Dal Secular (@JanataDal_S) August 12, 2024