ಸೌದಿ ರಾಜಧಾನಿ ರಿಯಾದ್ ಮೇಲೆ ಹೌತಿಗಳ ಕ್ಷಿಪಣಿ ದಾಳಿ; ಸಂಘರ್ಷ ತೀವ್ರ

0
Soudi-Houthi-attack

ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಅನ್ನು ಗುರಿಯಾಗಿಸಿ ಹೌತಿ ಬಂಡುಕೋರರು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ರಿಯಾದ್‌ನ ರಕ್ಷಣಾ ಸಚಿವಾಲಯದ ಮೇಲೆ ಕ್ಷಿಪಣಿ ಉಡಾವಣೆ ಮಾಡಲಾಗಿದ್ದು, ನಗರದ ಹಲವು ಭಾಗಗಳಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ.

ಹೌತಿಗಳು ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಕರಣಾಗಾರವಾದ ರಾಸ್ ತನುರಾವನ್ನೂ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆಯಿಂದ ಸೌದಿ ಅರೇಬಿಯಾದ ಪ್ರಮುಖ ರಕ್ಷಣಾ ಮತ್ತು ಇಂಧನ ಮೂಲಸೌಕರ್ಯಗಳ ಸುರಕ್ಷತೆ ಕುರಿತು ಆತಂಕ ಹೆಚ್ಚಾಗಿದೆ.

ಸೌದಿ ರಕ್ಷಣಾ ಪಡೆಗಳು ಹೌತಿಗಳು ಉಡಾವಣೆ ಮಾಡಿದ ಕ್ಷಿಪಣಿಗಳನ್ನು ಆಕಾಶದಲ್ಲೇ ಪ್ರತಿಬಂಧಿಸಿ ಹೊಡೆದುರುಳಿಸಿವೆ ಎಂದು ವರದಿಗಳು ತಿಳಿಸಿವೆ. ದಾಳಿಯಿಂದ ಸಂಭವಿಸಿದ ಹಾನಿ ಹಾಗೂ ಸಾವು-ನೋವುಗಳ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *