ಚುನಾವಣೆ ಅಕ್ರಮ ಎನ್ನುವ ರಾಹುಲ್ ಗೆದ್ದಿದ್ದು ಹೇಗೆ? ರಾಜೀನಾಮೆ ನೀಡಲಿ ಎಂದು ಬಿಜೆಪಿ ಸವಾಲು!

0
Rahul-gandhi-BJP-1

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಪಾವಿತ್ರ್ಯದ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಚುನಾವಣೆ ಅಕ್ರಮ ಎಂದು ಭಾವಿಸಿದರೆ ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಸವಾಲು ಹಾಕಿದ್ದಾರೆ.

ಅದೇ ಚುನಾವಣೆಯಲ್ಲಿ ಅಮೇಠಿಯಿಂದ ರಾಹುಲ್ ಗಾಂಧಿ ಹಾಗೂ ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಗೆದ್ದು ಸಂಸದರಾಗಿದ್ದಾರೆ. ಚುನಾವಣೆ ನಕಲಿ, ಪ್ರಧಾನಿ ಮೋದಿ ನಕಲಿ ಪ್ರಧಾನಿ ಎನ್ನುವ ರಾಹುಲ್, ಇದೇ ಚುನಾವಣೆಯಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಹತಾಶ ರಾಜಕಾರಣಿಯಾಗಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಪ್ರತಿದಿನ ಸುಳ್ಳು ಹೇಳುವುದರಲ್ಲಿ ಅವರು ಪಿಎಚ್‌ಡಿ ಪಡೆದಿದ್ದಾರೆಯೇ ಎಂದು ವ್ಯಂಗ್ಯವಾಡಿದ್ದಾರೆ. 14 ಕೋಟಿ ನಕಲಿ ಮತದಾರರಿದ್ದಾರೆ ಎಂಬ ಆರೋಪಕ್ಕೂ ತಿರುಗೇಟು ನೀಡಿದ್ದಾರೆ.

ಮತದಾರರ ಪಟ್ಟಿಗೆ ಸಂಬಂಧಿಸಿದ ರಾಹುಲ್ ಹೇಳಿಕೆಗಳು ಸಾಂವಿಧಾನಿಕ ಹುದ್ದೆಯಲ್ಲಿರುವವರನ್ನೂ ದಾರಿ ತಪ್ಪಿಸಿವೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ. ಮಹಿಳೆಯರಿಗೆ ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಿ ಮೋದಿ ಬದ್ಧರಾಗಿದ್ದಾರೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *