IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

0
IPL 2025- CHAMPIAN RCB TEAM

ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ.


ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ RCB ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಕಾದಾಟ ನಡೆಸಿ 6 ರನ್​ಗಳ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಈ ನಡುವೆ, IPL ಗೆದ್ದ ಆರ್‌ಸಿಬಿ ತಂಡ ಬಹುಮಾನದ ಮೊತ್ತವಾಗಿ 20 ಕೋಟಿ ರೂಪಾಯಿ ಪಡೆಯಲಿದೆ. ರನ್ನರ್ ಅಪ್ ಪಂಜಾಬ್ ಕಿಂಗ್ಸ್ ತಂಡಕ್ಕೂ 13 ಕೋಟಿ ರೂಪಾಯಿ ಬಹುಮಾನವಾಗಿ ಸಿಗಲಿದೆ. ಅಷ್ಟೇ ಅಲ್ಲ, ಕ್ವಾಲಿಫೈಯರ್ ಪಂದ್ಯಗಳಲ್ಲಿ ಆಡಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ 7 ಕೋಟಿ ರೂ ಪಡೆಯಲಿದೆ. ಎಲಿಮಿನೇಟರ್ ಆಡಿದ ಗುಜರಾತ್ ಟೈಟನ್ಸ್ ತಂಡಕ್ಕೆ 6.5 ಕೋಟಿ ರೂಪಾಯಿ ಪುರಸ್ಕಾರ ನಿಗದಿಯಾಗಿದೆ.

Leave a Reply

Your email address will not be published. Required fields are marked *

You may have missed