48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಇಂಗಿತ

0
Strait-of-Hormuz

ಟೆಹ್ರಾನ್: ಅಮೆರಿಕದ ಷರತ್ತುಗಳಿಗೆ ಒಪ್ಪಿಗೆ ಸೂಚಿಸಿದರೆ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಸಿದ್ಧವಿದೆ ಎಂದು ವರದಿಯಾಗಿದೆ. ಈ ಹಿಂದೆ ನೀಡಿದ್ದ ಏಳು ದಿನಗಳ ಶಾಂತಿ ಪ್ರಸ್ತಾವನೆಯ ಅವಧಿಯನ್ನು ಎರಡು ದಿನಗಳಿಗೆ ಇಳಿಸಲಾಗಿದೆ.

ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮಾತುಕತೆ ಮೂಲಕ ಬಿಕ್ಕಟ್ಟು ಬಗೆಹರಿಸಲು ಒಲವು ತೋರಿದ್ದು, ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ರಾಜತಾಂತ್ರಿಕ ಪರಿಹಾರಕ್ಕೆ ಸರ್ಕಾರಕ್ಕೆ ಅಧಿಕಾರ ನೀಡಿದ್ದಾರೆ. ಕತಾರ್ ಮತ್ತು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ-ಇರಾನ್ ನಡುವೆ ಮಾತುಕತೆ ನಡೆಯುತ್ತಿದೆ.

ಒಪ್ಪಂದ ಸಾಧ್ಯತೆ ಇದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಗತ್ಯಬಿದ್ದರೆ ಸೇನಾ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಇರಾನ್ ಕೂಡ ಯಾವುದೇ ಬೆದರಿಕೆಗೆ ತಕ್ಷಣ ಪ್ರತಿಕ್ರಿಯಿಸಲು ಸೇನೆಗೆ ಸೂಚಿಸಿದೆ.

ಇದೇ ವೇಳೆ, ಹಾರ್ಮುಜ್ ಜಲಸಂಧಿಯಲ್ಲಿ ನೌಕಾ ಮೈನ್‌ಗೆ ಡಿಕ್ಕಿಯಾಗಿ ತೈಲ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕಳೆದ ಒಂಬತ್ತು ದಿನಗಳಲ್ಲಿ 11 ಟ್ಯಾಂಕರ್‌ಗಳು ಬೆಂಕಿಗಾಹುತಿಯಾಗಿವೆ ಅಥವಾ ಮುಳುಗಿವೆ ಎಂದು ಇರಾನ್ ನೌಕಾಪಡೆ ಹೇಳಿದೆ.

Leave a Reply

Your email address will not be published. Required fields are marked *