ಮಧ್ಯಪ್ರಾಚ್ಯ ಸಂಘರ್ಷ: ಮಸೀದಿ ಮೇಲೆ ಇಸ್ರೇಲ್ ದಾಳಿ; ಸರಣಿ ಕಾರ್ಯಾಚರಣೆಯಲ್ಲಿ 13 ಮಂದಿ ಸಾವು
ಟೆಲ್ ಅವಿವ್: ಮಧ್ಯ ಪ್ರಾಚ್ಯಾದಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ತೀವ್ರಗೊಂಡಿದ್ದು ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿದೆ.
ಹಮಾಸ್ ಉಗ್ರರ ಹತ್ತದಗಿಸಲು ಪಣ ತೊಟ್ಟಿರುವ ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿನ ವೆಸ್ಟ್ ಬ್ಯಾಂಕ್ನ ಜೆನಿನ್ ನಗರದಲ್ಲಿರುವ ಅಲ್-ಅನ್ಸಾರ್ ಮಸೀದಿ ಸಂಕೀರ್ಣ ಮೇಲೆ ವೈಮಾನಿಕ ದಾಳಿ ನಡೆಸಿದೆ. ಮಸೀದಿ ಆವರಣದಲ್ಲಿ ಭಯೋತ್ಪಾದಕ ಸಂಘಟನೆ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡ್ ಸೆಂಟರ್ ಇರುವ ಬಗ್ಗೆ ಮಾಹಿತಿ ಕಲೆಹಾಕಿರುವ ಇಸ್ರೇಲ್ ಸೇನೆ ಈ ವೈಮಾನಿಕ ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ನಡುವೆ, ಗಾಜಾವನ್ನು ವಶಪಡಿಸಿಕೊಳ್ಳುವವರೆಗೆ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮತ್ತೊಮ್ಮೆ ಹೇಳಿದ್ದಾರೆ.