‘ಬಾಂಗ್ಲಾ ಮಾದರಿ.. ನಡೆ’? ವಿವಾದದ ಸುಳಿಯಲ್ಲಿ ಐವಾನ್ ಡಿಸೋಜಾ; ಕೈ ಶಾಸಕನ ವಿರುದ್ದ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗುತ್ತಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಇದೀಗ ತಮ್ಮ ಲೂಸ್ ಟಾಕ್‌ನಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.‌ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರನ್ನು ಬಾಂಗ್ಲಾದೇಶ ಮಾದರಿಯಲ್ಲಿ ಕಾಂಗ್ರೆಸ್ ಶಾಸಕರೂ ಆದ ಐವಾನ್ ಡಿಸೋಜಾ ಹೇಳಿದ್ದಾರೆಂದು ಬಿಜೆಪಿ ನಾಯಕ ಸಿ.ಟಿ.ರವಿ ಆರೋಪಿಸಿದ್ದಾರೆ. ಐವಾನ್ ಡಿಸೋಜಾ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ‌ ಐವಾನ್‌ ಡಿಸೋಜ ಬಿಚ್ಚಿಟ್ಟಿದ್ದಾರೆ ಎಂದು ಸಿ.ಟಿ‌.ರವಿ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು?ರಾಜಭವನಕ್ಕೆ ಕಾಂಗ್ರೆಸ್‌ ಪುಢಾರಿಗಳನ್ನು ನುಗ್ಗಿಸುತ್ತೀರಾ? ಎಂದು ಪ್ರಶ್ನಿಸಿರುವ ರವಿ, ಕಾಂಗ್ರೆಸ್‌ ಶಾಸಕರ ಈ ಹೇಳಿಕೆಗೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ,, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.

ಕೂಡಲೇ ಪರಿಷತ್ ಸದಸ್ಯರಾದ ಐವಾನ್ ಡಿಸೋಜ ಅವರ ವಿರುದ್ದ ದೂರುನ್ನು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲಿಸ್ ಇಲಾಖೆಯ ಮಹಾನಿರ್ದೇಶಕರಿಗೆ ಸಿ.ಟಿ.ರವಿ ಮನವಿ ಮಾಡಿದ್ದಾರೆ.

You may have missed