68ನೇ ಕನ್ನಡ ರಾಜ್ಯೋತ್ಸವ; ಗರಿಗೆದರಿದ ಭುವನೇಶ್ವರಿ ಮಹಾವೈಭವ

ಬೆಂಗಳೂರು: ನಾಡಿನೆಲ್ಲೆಡೆ 68ನೇ ಕನ್ನಡ ರಾಜ್ಯೋತ್ಸವದ ರಂಗು ಆವರಿಸಿದೆ. ವಿವಿಧ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಆಚರಣೆ ಮೂಲಕ ಸಂಭ್ರಮಿಸುತ್ತಿದೆ.

ರಾಜ್ಯ ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೇ ವೇಳೆ, ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಸಾಂಸ್ಕೃತಿಕ ಮಹಾವೈಭವಕ್ಕೆ ಮುನ್ನುಡಿ ಬರೆಯಲಾಯಿತು. ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಮಾರಂಭಕ್ಕೆ ಆಕರ್ಷಣೆ ತುಂಬಿದವು.

ವಿವಿಧ ಶಾಲೆಗಳ ಮಕ್ಕಳು ನೃತ್ಯ ರೂಪಕ ಮೂಲಕ ಗಮನ ಸೆಳೆದರು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಎನ್.ಚಲುವರಾಯಸ್ವಾಮಿ, ಹಾಗೂ ರಿಜ್ವಾನ್ ಅರ್ಷದ್ ಸೇರಿದಂತೆ ಶಾಸಕರು, ಗಣ್ಯಾತಿಗಣ್ಯರು ಸಮಾರಂಭದಲ್ಲಿ ಭಾಗವಹಿಸಿದರು.

You may have missed