ಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡ

0
kannada-cm-KANNADA

ರಾಜ್ಯೋತ್ಸವ ಮೂಲಕ ಭುವನೇಶ್ವರಿ ಆರಾಧನೆ ಶ್ರದ್ಧಾಭಕ್ತಿ ಹಾಗೂ ಅದ್ಧೂರಿಯಿಂದ ಸಾಗಿತು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಈ ವರ್ಣರಂಜಿತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ರಾಷ್ಟ್ರ ಧ್ವಜಾರೋಹಣ, ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು. ರಾಷ್ಟ್ರಗೀತೆಯ ಬಳಿಕ ಪಾರಿವಾಳವನ್ನು ಹಾರಿ ಬಿಡಲಾಯಿತು.
ನಂತರ, ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ಕನ್ನಡ ಧ್ವಜದಲ್ಲಿನ ಬಣ್ಣಗಳ ಬಲೂನ್ ಗಳನ್ನು ಸಿಎಂ ಮುಗಿಲೆತ್ತರಕ್ಕೆ ಹಾರಿಸಿ ಬಿಟ್ಟರು..
ಈ ಸಂಭ್ರಮದ ನಡುವೆ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನ್ನಡ ಮಾತೃಭಾಷೆಯಾಗಬೇಕು, ನಾಡಭಾಷೆಯಾಗಿರಬೇಕು, ಇದೇ ಭಾಷೆಯಲ್ಲಿ ಕಲಿಕೆಯನ್ನು ಮಾಡಬೇಕು ಎಂದು ಪ್ರತಿಪಾದಿಸಿದ ಅವರು, ಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡ ಎಂದು ಜನತೆಗೆ ಕರೆ ನೀಡಿದರು.


ಇಂಗ್ಲೀಷ್ ಸಂಪರ್ಕ ಭಾಷೆಯಷ್ಟೇ, ಹಾಗಾಗಿ ಕನ್ನಡದಲ್ಲೇ ಪ್ರತಿಯೊಬ್ಬರು ಓದಬೇಕು, ಬರೆಯಬೇಕು. ಸರ್ಕಾರ ಕೂಡ ಇದಕ್ಕಾಗಿ ಸೂಕ್ತ ಪ್ರಯತ್ನವನ್ನು ಮಾಡುತ್ತಿದೆ ಎಂದ ಅವರು, ರಾಜ್ಯ ಸರ್ಕಾರ ಕನ್ನಡದ ಶಾಲಾ ಮಕ್ಕಳಿಗೆ ಎಲ್ಲಾ ಸೌಕರ್ಯ ನೀಡುತ್ತಿದೆ. ಈಗಾಗಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯದಂತಹ ಯೋಜನೆಗಳನ್ನು ಪ್ರಕಟಿಸಿದ್ದು, ಇದೀಗ ಈ ವರ್ಷದಿಂದಲೇ ಶೂ, ಸಮವಸ್ತ್ರ ವಿತರಿಸುವ ಕಾರ್ಯಕ್ರಮವೂ ಮಕ್ಕಳಿಗೆ ವರದಾನವಾಗಿದೆ ಎಂದರು.
ಕನ್ನಡವನ್ನು ಮಾದ್ಯಮ ಭಾಷೆಯನ್ನಾಗಿಸುವ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ತಾತ್ಕಾಲಿಕ ಹಿನ್ನಡೆಯುಂಟಾಗಿದೆ. ಆದರೂ ಮುಂದಿನ ದಿನಗಳಲ್ಲಿ ಜಯ ಸಿಗುವ ವಿಶ್ವಾಸವಿದ್ದು ಅದಕ್ಕಾಗಿಯೇ ಕಾಯಿದೆಯನ್ನು ಮಾಡಿದ್ದೇವೆ ಎಂದು ಸಿಎಂ ಹೇಳಿದರು.
ಪ್ರಸ್ತುತ ಟಿವಿ ಚಾನೆಲ್ ಗಳಲ್ಲಿ ದಿನ ಬೆಳಗಾದರೆ ಸಾಕು ಜ್ಯೋತಿಷ್ಯ ಕಾರ್ಯಕ್ರಮಗಳು ಬಿತ್ತರವಾಗುತ್ತಿವೆ. ಇಂತಹ ಕಾರ್ಯಕ್ರಮಗಳು ಮಕ್ಕಳ ವೈಚಾರಿಕತೆ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಅಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಾವೆಲ್ಲ ಪರಧರ್ಮ ಸಹಿಷ್ಣುತೆ ಬೆಳೆಸಿಕೊಳ್ಳಬೇಕು, ಮಕ್ಕಳಿಗೂ ಪರಧರ್ಮ ಸಹಿಷ್ಣುತೆ ತಿಳಿ ಹೇಳಬೇಕಿರುವುದರಿಂದ ಪಠ್ಯ ಕ್ರಮದಲ್ಲೂ ಬದಲಾವಣೆ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

Leave a Reply

Your email address will not be published. Required fields are marked *