ಕಾವೇರಿ ಹೋರಾಟ; ಬಂದ್ ಹಿನ್ನೆಲೆ ಕಾನೂನು ಕಾಲೇಜ್‌ಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕಾವೇರಿ ಹೋರಾಟ ಹಾಗೂ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ನಡೆಯಬೇಕಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (Karnataka State Law University) (KSLU’s LAW SCHOOL) ಕುಲಪತಿ ಪ್ರೊ.ಡಿ.ಸಿ. ಬಸವರಾಜು ಅವರು, ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆಗಬಹುದಾದ ಅನಾನುಕೂಲತೆಗಳನ್ನು ಮನಗಂಡು ಸೆಪ್ಟೆಂಬರ್ 26ರ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಕಾನೂನು ವಿಶ್ವವಿದ್ಯಾಲಯ ನಡೆಸುತ್ತಿರುವ, ಮಂಗಳವಾರ ನಡೆಯಬೇಕಿರುವ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಅವರು, ಮಂಗಳವಾರದ ಪರೀಕ್ಷೆಯನ್ನು ಅಕ್ಟೋಬರ್ 8ಕ್ಜೆ ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶಗೊಂಡಿರುವ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿಯು ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ವಿವಿಧ ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಿವೆ.

ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿರುವ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಂಗಳವಾರ ನಡೆಯಬೇಕಿರುವ ಪರೀಕ್ಷೆ ಮುಂದೂಡುವ ಬಗ್ಗೆ ತೀರ್ಮಾನಿಸಿದೆ ಎಂದು ಕುಲಪತಿಗಳು ತಿಳಿಸಿದ್ದಾರೆ.

You may have missed