ಕನ್ನಡಿಗ ಉಮ್ರಾ ಯಾತ್ರಿಕರ ಸುರಕ್ಷಿತ ವಾಪಸಾತಿಗೆ ಕೇಂದ್ರದ ನೆರವು ಕೋರಿ ವಿದೇಶಾಂಗ ಸಚಿವರಿಗೆ ಸಿಎಂ ಆಗ್ರಹ

0
Saudi-Arabia-Mosque-in-Makkah-Umrah

ಬೆಂಗಳೂರು: ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾದಲ್ಲಿ 600ಕ್ಕೂ ಹೆಚ್ಚು ಕರ್ನಾಟಕದ ಉಮ್ರಾ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಅವರ ಸುರಕ್ಷಿತ ಮತ್ತು ಶೀಘ್ರ ವಾಪಸಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ, ಸಿಲುಕಿರುವ ಯಾತ್ರಿಕರನ್ನು ತುರ್ತಾಗಿ ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಈ ಕಾರ್ಯಾಚರಣೆಗೆ ಭಾರತೀಯ ರಾಜತಾಂತ್ರಿಕ ಕಚೇರಿಗಳು ಮತ್ತು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಅಗತ್ಯವಿದ್ದಲ್ಲಿ ಯಾತ್ರಿಕರ ವಾಪಸಾತಿಗಾಗಿ ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವಂತೆಯೂ ಮನವಿ ಮಾಡಿದ್ದಾರೆ. ವಾಪಸಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಯಾತ್ರಿಕರಿಗೆ ಆಹಾರ, ವಸತಿ ಮತ್ತು ಇತರ ಅಗತ್ಯ ತಾತ್ಕಾಲಿಕ ನೆರವು ಒದಗಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಯಾತ್ರಿಕರ ಸುರಕ್ಷತೆ, ಗೌರವ ಮತ್ತು ಕಲ್ಯಾಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿರುವ ಮುಖ್ಯಮಂತ್ರಿ, ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಕರ್ನಾಟಕ ಸರ್ಕಾರ ಅಗತ್ಯ ಸಹಕಾರ ನೀಡಲು ಸಿದ್ಧವಿದೆ ಎಂದು ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed