ಬಿಜೆಪಿ ಅಭ್ಯರ್ಥಿಯ ಚುನಾವಣಾ ಸವಾಲು; ಪ್ರಿಯಾಂಕಾ ಗಾಂಧಿಗೆ ಕೇರಳ ಹೈಕೋರ್ಟ್ ನೋಟಿಸ್

0

ಕೊಚ್ಚಿ: ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಅವರು ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಕೇರಳ ಹೈಕೋರ್ಟ್ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರಿಗೆ ನೋಟಿಸ್ ನೀಡಿದೆ. ಪ್ರಿಯಾಂಕಾ ಗಾಂಧಿ ಅವರಿಗೆ ನೀಡಿರುವ ನೋಟಿಸ್‌ನಲ್ಲಿ, ಎರಡು ತಿಂಗಳೊಳಗೆ ಉತ್ತರ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.

ನೀಲಂಬೂರ್ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಆರ್ಯದನ್ ಶೌಕತ್ ಪರ ಪ್ರಚಾರ ಮಾಡಲು ಪ್ರಿಯಾಂಕಾ ಗಾಂಧಿ ಈ ವಾರದ ಕೊನೆಯಲ್ಲಿ ತಮ್ಮ ಕ್ಷೇತ್ರಕ್ಕೆ ಆಗಮಿಸಲಿರುವ ಸಂದರ್ಭದಲ್ಲೇ ಈ ನೋಟಿಸ್ ಬಂದಿದೆ.

ನೀಲಂಬೂರ್ ವಿಧಾನಸಭಾ ಕ್ಷೇತ್ರವು ವಯನಾಡ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಡಿಸೆಂಬರ್‌ನಲ್ಲಿ ಪ್ರಿಯಾಂಕಾ ಅವರ ಗೆಲುವನ್ನು ರದ್ದುಗೊಳಿಸುವಂತೆ ಹರಿದಾಸ್ ಅರ್ಜಿ ಸಲ್ಲಿಸಿದ್ದರು. ಗಾಂಧಿ ತಮ್ಮ ನಾಮಪತ್ರದಲ್ಲಿ ಕೆಲವು ವಿವರಗಳನ್ನು ಮರೆಮಾಚಿದ್ದಾರೆ, ಇದರಲ್ಲಿ ಅವರು ಮತ್ತು ಅವರ ಕುಟುಂಬದ ಒಡೆತನದ ಆಸ್ತಿಗಳ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಮತ್ತು ಅವರ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ನಿಖರವಾಗಿ ಪಟ್ಟಿ ಮಾಡಿಲ್ಲ ಎಂದು ಹರಿದಾಸ್ ಆರೋಪಿಸಿದ್ದಾರೆ.

ಹರಿದಾಸ್ ಇದು ಮಾದರಿ ನೀತಿ ಸಂಹಿತೆಗೆ ವಿರುದ್ಧವಾಗಿದೆ ಮತ್ತು ಭ್ರಷ್ಟಾಚಾರಕ್ಕೆ ಸಮಾನವಾಗಿದೆ ಎಂದು ಮತ್ತಷ್ಟು ಗಮನಸೆಳೆದಿದ್ದಾರೆ.

ಪ್ರಿಯಾಂಕಾ ಗಾಂಧಿಯವರ ಸಹೋದರ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ತಮ್ಮ ಕುಟುಂಬದ ಸ್ಥಾನವನ್ನು ಉಳಿಸಿಕೊಳ್ಳಲು ಆ ಸ್ಥಾನವನ್ನು ತ್ಯಜಿಸಿ ಸಹೋದರಿಗೆ ಬಿಟ್ಟುಕೊಟ್ಟಿದ್ದರು.

ರಾಹುಲ್ ಗಾಂಧಿ ಏಪ್ರಿಲ್ 2024 ರ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಸ್ಥಾನವನ್ನು 3.64 ಲಕ್ಷ ಮತಗಳ ಕಡಿಮೆ ಅಂತರದಿಂದ ಗೆದ್ದಿದ್ದರು. ಎರಡು ಕ್ಷೇತ್ರಗಲ್ಲಿ ಗೆದ್ದಿದ್ದರಿಂದಾಗಿ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ಡಿದ್ದರು. ಈ ಸ್ಥಾನಕ್ಕೆ ಕಳೆದ ವರ್ಷ ನವೆಂಬರ್‌ನಲ್ಲಿ ಉಪ ಚುನಾವಣಾ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಿಯಾಂಕಾ ಗಾಂಧಿ 4.10 ಲಕ್ಷ ಮತಗಳ ಅಂತರದಿಂದ ಗಗೆದ್ದಿದ್ದರು.

Leave a Reply

Your email address will not be published. Required fields are marked *

You may have missed