ಕರಾವಳಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ವಿಧಿವಶ; ಗಣ್ಯರ ಕಂಬನಿ

KMC - Dr.G.G.Lakshmana Prabhu

ಮಂಗಳೂರು: ಕರಾವಳಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರು ಇಂದು ನಿಧನ ಹೊಂದಿದ್ದಾರೆ. 61 ವರ್ಷ ವಯಸ್ಸಿನ ಡಾ.ಜಿ.ಜಿ.ಲಕ್ಷ್ಮಣ ಪ್ರಭು, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದರು

ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದ ಅವರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಶುಕ್ರವಾರ ಬೆಳಿಗ್ಗೆ ವಿಧಿವಶರಾದರು ಎಂದು ಮೂಲಗಳು ತಿಳಿಸಿವೆ.