ED ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿ ಪ್ರತಿಭಟನೆ

0
congress-flag4-768x490-1-1

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯ ಶುದ್ಧೀಕರಣ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಣಿ ಸತೀಶ್, ವಿಧಾನಪರಿಷತ್ ಮಾಜಿ ಸದಸ್ಯೆ ಜಲಜಾ ನಾಯಕ್, ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಮುನೀರ್, ಕೇಂದ್ರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ., ಪಶ್ಚಿಮ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ್, ದಕ್ಷಿಣ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷ ಹೆಚ್.ಡಿ.ಮಲ್ಲೇಶ್ ಸೇರಿದಂತೆ ಪ್ರಚಾರ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಬಿಜೆಪಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿದರು. ತಳ ಸಮುದಾಯದ ನಾಯಕರನ್ನು ಬಿಜೆಪಿ ಸಹಿಸಿಕೊಳ್ಳುತ್ತಿಲ್ಲ. ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಣ ಮಾಡಿರುವುದು ಖಂಡನೀಯ ಎಂದು ಹೇಳಿದರು.

ಈ ಘಟನೆಯನ್ನು ವಿರೋಧಿಸಿ ಮಾತನಾಡಿದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನ್ಯಾಯ ಕೇಳಲು ಮುಂದಾದವರಿಗೂ ಅನ್ಯಾಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕ್ರಮಗಳನ್ನು ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮುಖಂಡರು ತಿಳಿಸಿದರು.

Leave a Reply

Your email address will not be published. Required fields are marked *