KRS: ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ಕಾವೇರಿ ಲಡ್ಡು ಪ್ರಸಾದ

0
krs mandya

ಮಂಡ್ಯ: ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನಲ್ಲಿ ನೆರವೇರಲಿದೆ.

ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ ಹತ್ತು ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ವೀಕ್ಷಿಸಿ ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಲಡ್ಡು ಮಾಡಿಸಿದ್ದಾರೆ

ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಗಮಿಸುವವರಿಗೆ ಲಾಡು ವಿತರಣೆ ಮಾಡುವ ಮಾದರಿಯಲ್ಲಿ “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಡ್ಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.

ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಬಹುದಾಗಿದೆ. ಹೀಗಾಗಿ ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ವಿತರಣೆ ಮಾಡಲಾಗುತ್ತದೆ.

ಸೆಪ್ಟೆಂಬರ್ 26ರ ಶುಕ್ರವಾರ ಸಾಯಂಕಾಲ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.

Leave a Reply

Your email address will not be published. Required fields are marked *