KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ
ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಿದೆ.
ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲದೆ.
ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ ನಡೆಯಲಿದೆ ಕೆಎಸ್ಸಾರ್ಟಿಸಿ ಮಾಹಿತಿ ಒದಗಿಸಿದೆ.