ಕ್ಲೌಡ್ ನೈನ್ ಆಸ್ಪತ್ರೆ ವೈದ್ಯರ ನೀರಲಕ್ಷ್ಯ ಆರೋಪ: ಕೋಮಾದಲ್ಲಿರುವ ಒಂದು ವರ್ಷದ ಮಗುವೀಣೆ ಆರೋಗ್ಯ ವಿಚಾರಿಸಿದ HDK

0
Alleged-Medical-Negligence-at-Cloudnine-Kumaraswamy-Visits-Child-in-Hospital

ಬೆಂಗಳೂರು: ನಾಗರಬಾವಿಯ ಕ್ಲೌಡ್ ನೈನ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಒಂದು ವರ್ಷದ ಮಗು ಶಯಾನ ಕೋಮಾಗೆ ತಲುಪಿದೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಜಯನಗರದ ಕ್ಲೌಡ್ ನೈನ್ ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ವೈದ್ಯರು ಹಾಗೂ ಮಗುವಿನ ಪೋಷಕರೊಂದಿಗೆ ಚರ್ಚಿಸಿ, ಮುಂದಿನ ಚಿಕಿತ್ಸೆಯ ಕುರಿತು ಮಾಹಿತಿ ಪಡೆದರು.

ಮಗು ಸದ್ಯ ತುರ್ತು ನಿಗಾ ಘಟಕದಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದೆ. ಸಂಪೂರ್ಣ ಗುಣಮುಖವಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

“ಎಷ್ಟೇ ಖರ್ಚಾದರೂ ಪರವಾಗಿಲ್ಲ, ಅಗತ್ಯವಿದ್ದರೆ ಹೊರಗಿನಿಂದ ಮಕ್ಕಳ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ತಿಳಿಸಿದ್ದೇನೆ. ಪೋಷಕರ ಜೊತೆ ನಾನಿದ್ದೇನೆ ಎಂಬ ಭರವಸೆಯನ್ನೂ ನೀಡಿದ್ದೇನೆ. ಮಗು ಗುಣಮುಖವಾಗಿ ಮನೆಗೆ ಮರಳಲಿದೆ ಎಂಬ ಅದಮ್ಯ ವಿಶ್ವಾಸ ನನಗಿದೆ” ಎಂದು ಅವರು ತಿಳಿಸಿದ್ದಾರೆ.

📍ಬೆಂಗಳೂರು

ನಾಗರಬಾವಿಯ ಕ್ಲೌಡ್ ನೈನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಒಂದು ವರ್ಷದ ಮಗು ಶಯಾನ ಕೋಮಾಗೆ ತಲುಪಿದೆ ಎಂಬ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಆ ಮಗು ಚಿಕಿತ್ಸೆ ಪಡೆಯುತ್ತಿರುವ ಜಯನಗರದಲ್ಲಿರುವ ಕ್ಲೌಡ್ ನೈನ್ ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯರು ಮತ್ತು ಪೋಷಕರೊಂದಿಗೆ ಚರ್ಚಿಸಿ ಮುಂದಿನ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆಯಲಾಯಿತು.

ಸದ್ಯಕ್ಕೆ ಮಗು ತುರ್ತುನಿಗಾ ಘಟಕದಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗುಣಮುಖವಾಗಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕು ಎಂದು ಅವರು ಹೇಳಿದ್ದಾರೆ. ಎಷ್ಟೇ ಖರ್ಚಾದರೂ ಆಗಲಿ, ಅಗತ್ಯಬಿದ್ದರೆ ಹೊರಗಿನಿಂದ ಮಕ್ಕಳ ತಜ್ಞ ವೈದ್ಯರನ್ನು ಕರೆಸಿ ಎಂದು ವೈದ್ಯರಿಗೆ ತಿಳಿಸಿದ್ದೇನೆ. ಪೋಷಕರ ಜೊತೆ ನಾನಿದ್ದೇನೆ ಎನ್ನುವ ಭರವಸೆ ಕೊಟ್ಟಿದ್ದೇನೆ.

ಮಗು ಗುಣಮುಖಗೊಂಡು ಮನೆಗೆ ಮರಳಿ ಬರುತ್ತದೆ ಎಂಬ ಅದಮ್ಯ ವಿಶ್ವಾಸ ನನ್ನದಾಗಿದೆ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 9, 2026

Leave a Reply

Your email address will not be published. Required fields are marked *