ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ

0
Hanuru-Manasa-Education-Institution-scaled-1

ಹನೂರು : ಮಾನಸ ಶಿಕ್ಷಣ ಸಂಸ್ಥೆಯು 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾನಸ ಶಿಕ್ಷಣ ಸಂಸ್ಥೆ ಮತ್ತು ಮಾನಸ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆ.22 ರಂದು ಪಟ್ಟಣದ ಗೌರಿ ಶಂಕರ್ ಕಲ್ಯಾಣ ಮಂಟಪವನ್ನು ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿಗಳಾದ ಡಾ ದತ್ತೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಹನೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಒದಗಿಸಿದ ಅವರು, ಕಳೆದ 2019ರಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸುಮಾರು 84 ಕಂಪನಿಗಳು ಭಾಗವಹಿಸಿದ್ದವು 1800 ಆಕಾಂಕ್ಷಿಗಳು ಬಂದಿದ್ದರು 720 ಜನರಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗಿತ್ತು. ಪ್ರಸ್ತುತ ವರ್ಷದಲ್ಲಿಯೂ ಸಹ ಈ ಭಾಗದ ನಿರುದ್ಯೋಗ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನ ಯುವಕ ಯುವತಿಯರು ಹೆಚ್ಚಾಗಿ ಪಾಲ್ಗೊಂಡು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಅಲ್ಲದೇ ಮುಂದಿನ ದಿನಗಳಲ್ಲಿ ಕೊಳ್ಳೇಗಾಲ ಮತ್ತು ಹನೂರಿನಲ್ಲಿ ಬೃಹತ್ ಹೇಲ್ತ್ ಕ್ಯಾಂಪ್ ನೆಡೆಸುವ ಅಲೋಚನೆಯನ್ನು ಸಹ ಮಾಡಿದ್ದು ಈ ಬಗ್ಗೆ ವಿವಿಧ ಆಸ್ಪತ್ರೆ ವೈದ್ಯರನ್ನು ಸಂಪರ್ಕಿಸಿ ಮಾಹಿತಿಯನ್ನು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಾಲೂರು ಮಠದ ಪೀಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನಸ್ವಾಮೀಜಿಗಳು ವಹಿಸಲಿದ್ದಾರೆ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎನ್ ಮಹೇಶ್ ಭಾಗವಹಿಸುವವರು ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ ದತ್ತೇಶ್ ಕುಮಾರ್ ಅವರು ವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಚನ್ನಶೆಟ್ಟಿ ಎಂ 7892942539, ಆರ್ ಶಂಕರ್ 9986599561, ರವಿ ಶಂಕರ್ 9980112241 ಸಂಪರ್ಕಸಲು ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ರಾಮಾಪುರ ಬಿಜೆಪಿ ಮಂಡಲ ಅಧ್ಯಕ್ಷರಾದ ರಾಜು, ಮುಖಂಡರಾದ ಸಿದ್ದಪ್ಪ, ವೆಂಕಟೇಗೌಡ, ರಮೇಶ್ ನಾಯ್ಡು, ಶ್ರೀನಿವಾಸ್, ಬಸವರಾಜು, ನಟರಾಜುಗೌಡ, ಸೀನಾ ನಾಗೇಂದ್ರ , ಸಂಸ್ಥೆಯ ವಿಶೇಷ ಅಧಿಕಾರಿಗಳಾದ ದಿನೇಶ್, ಚೆನ್ನಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಶಂಕರ್ ಇನ್ನೀತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *