ಟಿಪ್ಪು ಜಯಂತಿ ; ಶ್ರೀರಂಗಪಟ್ಟಣದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆ
ನವಂಬರ್ 10 ರಂದು ಕರ್ನಾಟಕ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಹೊರಟಿರುವುದನ್ನು ಖಂಡಿಸಿ ಮಂಡ್ಯ ಬಳಿಯ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶ್ರೀರಂಗಪಟ್ಟಣದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ, ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಟಿಪ್ಪು ಓರ್ವ ವಿವಾದಾಸ್ಪದ ವ್ಯಕ್ತಿ. ಇಂತಹ ವ್ಯಕ್ತಿ ಜನ್ಮದಿನವನ್ನು ಆಚರಿಸಲು ಸರ್ಕಾರ ಮುಂದಾಗಿರುವುದು ದುರಂತ ಎಂದು ಕಿಡಿಕಾರಿದರು. ಬಳಿಕ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.