ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಬೇಧಿಸಿದ ಸಿಸಿಬಿ; ಮೂವರ ಸೆರೆ

police night3

ಮಂಗಳೂರು: ಬಂದರು ನಗರಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗೆ ಇಳಿದು ಡ್ರಗ್ ವಹಿವಾಟನ್ನು ಬೇಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಇಂದು MDMA ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಬಂಧಿಸಿದ್ದಾರೆ.

ಎಂಡಿಎಂಎ ಮಾದಕ ವಸ್ತುವನ್ನು ತಂದು ವಿತರಿಸುದ್ದಿದ್ದ ತಂಡದ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಯುವಕರ ತಂಡವನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ. ಅವರ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆಯನ್ನು ಬಿರುಸುಗೊಳಿಸಿದ ಪೊಲೀಸರು, MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಬಲೆಗೆ ಕೆಡವಿದ್ದಾರೆ. ಬಂಧಿತರನ್ನು ಇಮ್ರಾನ್, ಅಬ್ದುಲ್ ಬಶೀರ್ ಅಬ್ಬಾಸ್,​ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ ಡ್ರಗ್ಸ್ ಹಾಗೂ ದಂಧೆಗೆ ಬಳಸಿದ್ದಾರೆನ್ನಲಾದ ಕಾರು, 6 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

You may have missed