‘ಮೇಕೆದಾಟು, ಮಹಾದಾಯಿ’ಗೆ ಕಾಯಕಲ್ಪ; ದಿಲ್ಲಿಯಲ್ಲಿ ಕಾರ್ಯತಂತ್ರ

0

ದೆಹಲಿ: ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ್ ರವರು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖವತ್ ಅವರ ನಿವಾಸದಲ್ಲಿ ಇಂದು ಮುಂಜಾನೆ ಈ ಮಹತ್ವದ ಸಭೆ ನಡೆಯಿತು. ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಮಹತ್ವದ ಚರ್ಚೆ ನಡೆಯಿತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಸಚಿವ ಜಾರಜೋಳ ಮನವಿ ಮಾಡಿದರು.

ಕೇಂದ್ರ ಸಚಿವರ ಭೇಟಿ ಬಳಿಕ ಮಾಹಿತಿ ಹಂಚಿಕೊಂಡ ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ, ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು ತಿಳಿಸಿದರು. ಮಹದಾಯಿ ಯೋಜನೆಯ ಅನುಮೋದನೆ ಆದಷ್ಟು ಬೇಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed