ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

0
Mandya-Cheluvarayaswami-meet-farmers-300x200-1

ಮಂಡ್ಯ: ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಅವರು ರೈತರ ಜಮೀನಿನಲ್ಲಿ ಸೊರಗಿರುವ ಹಲಸಂದೆ ಬೆಳೆಯನ್ನು ಪರಿಶೀಲಿಸಿದರು.

ಮಳೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ಮೇಲೆ ಉಂಟಾಗಿರುವ ಪರಿಣಾಮದ ಕುರಿತು ಸಚಿವರು ರೈತರಿಂದ ಮಾಹಿತಿ ಪಡೆದುಕೊಂಡರು. ಬೆಳೆ ಹಾನಿಯಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದ ಅವರು, ಸ್ಥಳದಲ್ಲಿದ್ದ ಕೃಷಿ ಇಲಾಖೆಯ ಅಧಿಕಾರಿಗಳಿಂದ ಬೆಳೆ ಪರಿಸ್ಥಿತಿ ಹಾಗೂ ಹಾನಿಯ ಪ್ರಮಾಣದ ಬಗ್ಗೆ ಮಾಹಿತಿ ಪಡೆದರು.

ರೈತರಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಬೆಳೆ ಹಾನಿಯ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು. ಜಮೀನಿನಲ್ಲಿ ಉಂಟಾಗಿರುವ ಬೆಳೆ ಪರಿಸ್ಥಿತಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಳವಳ್ಳಿ ಶಿವಣ್ಣ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *