ಬಿಜೆಪಿ ಆಡಳಿತಾವಧಿಯ ಎಲ್ಲಾ ಹಗರಣಗಳ ಮರು ತನಿಖೆಗೆ ಸಿದ್ದು ಸರ್ಕಾರ ನಿರ್ಧಾರ

0
basavaraj-Bommai-1-300x176

ಬೆಂಗಳೂರು: ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸಮರ ಸಾರಿದ್ದ ಕಾಂಗ್ರೆಸ್ ಪಕ್ಷ ಚುನಾವಣಾ ಅಸ್ತ್ರವನ್ನಾಗಿಸಿ ಅಧಿಕಾರಕ್ಕೆ ಬಂದಿದೆ. ನೂತನ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಎಲ್ಲಾ ಹಗರಣಗಳ ಮರು ತನಿಖೆ ನಡೆಸಲು ಮುಂದಾಗಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಬಿಜೆಪಿ ಸರ್ಕಾರದಲ್ಲಿ ಕೇಳಿಬಂದಿದ್ದ ಪಿಎಸ್ಐ ಹಗರಣ, ಗುತ್ತಿಗೆದಾರರ ಮೇಲೆ ಲಂಚದ ಒತ್ತಡ ಮುಂತಾದ ಹಲವಾರು ಆರೋಪಗಳ ಬಗ್ಗೆ ಮರುತನಿಖೆಗೆ ನಡೆಸಲಾಗುವುದು ಎಂದು ಹೇಳಿದರು.

ಶನಿವಾರ ನಡೆದ ಸಂಪುಟ ಸಭೆಯಲ್ಲಿ ಹಳೆಯ ಪ್ರಕರಣಗಳ ತನಿಖೆ ಕುರಿತಂತೆ ವಿಷಯ ಪ್ರಸ್ತಾಪವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತಂತೆ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅದರಂತೆ ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

Leave a Reply

Your email address will not be published. Required fields are marked *