ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂ ಗೋಲ್ ಮಾಲ್; ಅಧಿಕಾರಿ ಅಮಾನತಿಗೆ ರಾಮಲಿಂಗಾ ರೆಡ್ಡಿ ಆದೇಶ

0
Ramalinga Reddy

ಬೆಂಗಳೂರು: ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಟ್ರೆಜರಿಯಲ್ಲಿ ಜಮಾ ಆಗದಿರುವ ಪ್ರಕರಣದಲ್ಲಿ ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ.

ಬಳ್ಳಾರಿ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಸರ್ಕಾರದ ಖಜಾನೆಗೆ ಜಮಾ ಮಾಡಬೇಕಾಗಿದ್ದ ಲಕ್ಷಾಂತರ ಹಣ ಒಂದು ವಾರದಿಂದ ಜಮಾ ಮಾಡಿರುವುದಿಲ್ಲ. ರವಿ ತವರಕೆರೆ ಹಣಕಾಸಿನ ಸೆಕ್ಷನ್ ನಿರ್ವಹಣೆ ಮಾಡುತ್ತಿದ್ದು, ಇವರು ಹಣ ಸಂದಾಯ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಆದರೆ ಸಾರಿಗೆ ಅಧಿಕಾರಿಗಳ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಸಚಿವರು ಕೂಡಲೇ ಸದರಿ ಸಿಬ್ಬಂದಿಯನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ದೇಶನ ನೀಡಿದ್ದಾರೆ. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಲು ಸಚಿವರು ಸಾರಿಗೆ ಆಯುಕ್ತರಿಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *