ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ

cold -rain

ಬೆಂಗಳೂರು: ರಾಜ್ಯದ ಕರಾವಳಿ ಮಲೆನಾಡಿನಲ್ಲಿ ನವೆಂಬರ್ 28ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

23.11.2023 ರಿಂದ 01.12.2023 ರವರೆಗೆ ಮಳೆಯ ಮುನ್ಸೂಚನೆ: ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.