Mysore dasara

ಬೆಂಗಳೂರು: ಜಗದ್ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳಿಗೆ ತಯಾರಿ ನಡೆಯುತ್ತಿದೆ. ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಅವರು ಬಿಡುಗಡೆ ಮಾಡಿದರು.

ಅಭಿಮನ್ಯು, ಭೀಮ, ಕಂಜನ್, ಧನಂಜಯ, ಪ್ರಶಾಂತ್, ಮಹೇಂದ್ರ, ಏಕಲವ್ಯ, ಕಾವೇರಿ, ಲಕ್ಷ್ಮೀ ಆನೆಗಳು ಮೊದಲ ಪಟ್ಟಿಯಲ್ಲಿವೆ. ಇನ್ನೂ 5 ಆನೆಗಳನ್ನು ಎರಡನೇ ಹಂತದಲ್ಲಿ ಕಾಡಿನಿಂದ ಮೈಸೂರಿಗೆ ತರಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed