ಮೈಸೂರು ದಸರಾ ವೈಭವ; ವಿದ್ಯುತ್ ದೀಪಗಳ ಬೆಳಕಿನಲ್ಲಿ ಕಂಗೊಳಿಸಿದ ಸಾಂಸ್ಕೃತಿಕ ನಗರಿ

0
Mysuru-City-Mysuru-Dasara

ಮೈಸೂರು: ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಮೈಸೂರು ನಗರದ ಪ್ರಮುಖ ರಸ್ತೆಗಳು ಹಾಗೂ ವಿವಿಧ ಪ್ರದೇಶಗಳು ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ದೀಪಗಳ ಬೆಳಕಿನಲ್ಲಿ ಸಿಂಗಾರಗೊಂಡ ಸಾಂಸ್ಕೃತಿಕ ನಗರಿಯ ಸೌಂದರ್ಯ ಕಣ್ಮನ ಸೆಳೆದಿದೆ..

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದಾದ್ಯಂತ ಮಾಡಲಾಗಿರುವ ಆಕರ್ಷಕ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಸೋಮವಾರ ರಾತ್ರಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಎನ್. ಚಲುವರಾಯಸ್ವಾಮಿ, ಯು.ಟಿ. ಖಾದರ್, ಯತೀಂದ್ರ ಸಿದ್ದರಾಮಯ್ಯ ಶಾಸಕರಾದ ಕೆ. ಹರೀಶ್ ಗೌಡ ಹಾಗೂ ದರ್ಶನ್ ಧ್ರುವನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *