‘ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳೆದು ಸಾಬೀತುಪಡಿಸಿವೆ

‘ಮೈಸೂರು: ವಿರೋಧಪಕ್ಷದ ಎಲ್ಲಾ ಆರೋಪಗಳನ್ನೂ ನಮ್ಮ ಗ್ಯಾರಂಟಿ ಯೋಜನೆಗಳು ಸುಳ್ಳು ಎಂದು ಸಾಬೀತು ಮಾಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪಗಳನ್ನು ಮಾಡಿದರು. ಸುಳ್ಳುಗಳ ಸುರಿಮಳೆ ಸುರಿಸಿದರು. ಸ್ವತಃ ಪ್ರಧಾನಿ ಮೋದಿಯವರೇ ರಾಜ್ಯ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದರು. ಆದರೆ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ ಎಂದರು.

ಪ್ರತಿದಿನ ಕೋಟಿಗೂ ಅಧಿಕ ಮಂದಿ ಪ್ರತಿ ದಿನ, ಪ್ರತಿ ತಿಂಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮಾತುಗಳು ಸುಳ್ಳಾಗಿವೆ ಎಂದು ವಿವರಿಸಿದರು.