ಮೈಸೂರಿನಲ್ಲಿ ‘ಸಿಎಂ ಕಪ್ 2026’ ಕ್ರೀಡಾಕೂಟ: ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಸನ್ಮಾನ

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ‘ಸಿಎಂ ಕಪ್ 2026’ ಕ್ರೀಡಾಕೂಟಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಜಂಟಿಯಾಗಿ ಕ್ರೀಡಾಕೂಟ ಆಯೋಜಿಸಿವೆ.

ಕಾರ್ಯಕ್ರಮದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಗಾಲ್ಫ್ ಕ್ರೀಡಾಪಟು ಪ್ರಣವಿ ಉರ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು ಸನ್ಮಾನಿಸಿ, ಅವರ ಸಾಧನೆಯನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಸಿ. ಪುಟ್ಟರಂಗ ಶೆಟ್ಟಿ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಅಧ್ಯಕ್ಷ ಅನಿಲ್ ಕುಮಾರ್ ಸಿ., ಶಾಸಕರಾದ ತನ್ವೀರ್ ಸೇಠ್ ಮತ್ತು ಡಿ. ರವಿಶಂಕರ್, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಹಾಗೂ ಆಯುಕ್ತ ಎಂ.ಎನ್. ಅನುಚೇತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
