ಕುರಿಗಾಹಿ ಮಹಿಳೆಯರ ಸಮಸ್ಯೆ ಆಲಿಸಿದ ಡಾ. ನಾಗಲಕ್ಷ್ಮಿ; ಕುರಿ ಕಳ್ಳತನದ ಸಮಸ್ಯೆ ಬಗೆಹರಿಸಲು ಪೊಲೀಸರಿಗೆ ಸೂಚನೆ

0
Nagalakshmi-interacted-with-shepherd-women-Vijayapura

ವಿಜಯನಗರ: ಸಂಚಾರಿ ಕುರಿಗಾಹಿ ಮಹಿಳೆಯರ ಜೀವನೋಪಾಯದ ಸವಾಲುಗಳಿಗೆ ಅಗತ್ಯ ಬೆಂಬಲ ಕಲ್ಪಿಸುವುದು ಆದ್ಯತೆಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ತಿಳಿಸಿದ್ದಾರೆ.

ವಿಜಯನಗರ ಜಿಲ್ಲಾ ಪ್ರವಾಸದ ವೇಳೆ ಕುರಿಗಾಹಿ ಮಹಿಳೆಯರೊಂದಿಗೆ ಸಂವಾದ ನಡೆಸಿದ ಅವರು, ಕುರಿಗಳ ಕುಡಿಯುವ ನೀರು, ಚಿಕಿತ್ಸೆ, ಔಷಧಿಗಳ ಲಭ್ಯತೆ ಹಾಗೂ ಕುರಿ ಕಳ್ಳತನದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ಕುರಿಗಾಹಿಗಳಿಗೆ ಅಗತ್ಯ ಪೊಲೀಸ್ ರಕ್ಷಣೆ ಒದಗಿಸುವುದರ ಜೊತೆಗೆ ಸರ್ಕಾರಿ ಸೌಲಭ್ಯಗಳು, ಸಬ್ಸಿಡಿ ಮತ್ತು ಸಾಲ ಸೌಲಭ್ಯಗಳನ್ನು ಸುಲಭವಾಗಿ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಕುರಿಗಾಹಿ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಬದುಕಿಗೆ ಅಗತ್ಯ ನೆರವು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *