‘ನನ್ನ ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸುವ ಪ್ರಯತ್ನ’: ಛಲವಾದಿ ನಾರಾಯಣಸ್ವಾಮಿ ಬೇಸರ

0
Chalavadi-Narayanaswamy-1

ಬೆಂಗಳೂರು: ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾನು ನೀಡಿದ ಹೇಳಿಕೆಯನ್ನು ಕೆಲವರು ಉದ್ದೇಶಪೂರ್ವಕವಾಗಿ ತಿರುಚಿ ವಿವಾದ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಆ ಪಕ್ಷ ಸೃಷ್ಟಿಸುತ್ತಿದೆ ಎನ್ನಲಾದ ಅರಾಜಕತೆಯ ಕುರಿತು ಮಾತನಾಡಿದ್ದೇನೆಯೇ ಹೊರತು, ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ವೈಯಕ್ತಿಕವಾಗಿ ನಿಂದಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವ ಮೂಲಕ ವಿವಾದಕ್ಕೆ ಎಳೆಯಲಾಗುತ್ತಿದೆ. ತಮ್ಮ ಹೋರಾಟ ಕಾಂಗ್ರೆಸ್ ಪಕ್ಷದ ವಿರುದ್ಧವೇ ಹೊರತು, ಯಾರನ್ನೂ ವೈಯಕ್ತಿಕವಾಗಿ ಗುರಿಯಾಗಿಸಿಕೊಂಡಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

“ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ನೀಡಿದ ಹೇಳಿಕೆಯ ಕುರಿತು ನನ್ನ ಸ್ಪಷ್ಟನೆ.”

ನನ್ನ ಭಾಷಣದಲ್ಲಿ ಕಾಂಗ್ರೆಸ್ ಪಕ್ಷ ಸೃಷ್ಠಿಸುತ್ತಿರುವ ಅರಾಜಕತೆಯ ಬಗ್ಗೆ ಮತ್ತು ಪಕ್ಷದ ವಿರುದ್ಧ ಮಾತನಾಡಿದ್ದೇನೆಯೇ ಹೊರತು, ಯಾವುದೇ ನಿರ್ದಿಷ್ಟ ವ್ಯಕ್ತಿಯ ವಿರುದ್ಧ ವೈಯಕ್ತಿಕ ನಿಂದನೆ ಮಾಡಿಲ್ಲ. ನನ್ನ ಹೇಳಿಕೆಯನ್ನು ಕೆಲವರು ಉದ್ದೇಶಪೂರ್ವಕವಾಗಿ ತಿರುಚಿ, ತಪ್ಪಾಗಿ ಅರ್ಥೈಸುವ ಮೂಲಕ ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಹೋರಾಟ ಕಾಂಗ್ರೆಸ್ ಪಕ್ಷದ ಅರಾಜಕತೆಯ ವಿರುದ್ಧವೇ ಹೊರತು, ಇದು ಯಾರಿಗೂ ವ್ಯಕ್ತಿಗತವಾಗಿ ಮಾಡಿದ ಟೀಕೆಯಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇನೆ.

— Chalavadi Narayanaswamy (@NswamyChalavadi) November 3, 2026

Leave a Reply

Your email address will not be published. Required fields are marked *