ಜ.7ರಿಂದ 10ರವರೆಗೆ 73ನೇ ಮಂಡ್ಯದಲ್ಲಿ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾವಳಿ

0
Kabaddi-sports

ಮಂಡ್ಯ: 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾವಳಿಯನ್ನು ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು.

ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗುತ್ತಿರುವ ಸಿಆರ್‌ಎಸ್ ಕಪ್-2027 ಪಂದ್ಯಾವಳಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಂಡ್ಯದ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜನವರಿ 7ರಿಂದ 10ರವರೆಗೆ ಪಂದ್ಯಾವಳಿ ನಡೆಯಲಿದೆ. ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲರೂ ಹಿರಿಯರ ಮಾರ್ಗದರ್ಶನ ಪಡೆದು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪಂದ್ಯಾವಳಿಗೆ ಸರ್ಕಾರ ಹಾಗೂ ವೈಯಕ್ತಿಕವಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ತಾವು ಕ್ರೀಡಾಭಿಮಾನಿಯಾಗಿದ್ದು, ಜಿಲ್ಲೆಯ ಕೀರ್ತಿಗಾಗಿ ಅಗತ್ಯವಿರುವ ಎಲ್ಲ ಸಹಕಾರ ನೀಡಲು ಸಿದ್ಧವಿರುವುದಾಗಿ ತಿಳಿಸಿದರು. ಯಾವುದೇ ಅಸಮಾಧಾನ ಮತ್ತು ಗೊಂದಲಗಳಿಗೆ ಅವಕಾಶ ನೀಡದೆ, ಟೀಕೆಗಳಿಗೆ ಆಸ್ಪದವಾಗದಂತೆ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ಈ ರಾಷ್ಟ್ರೀಯ ಪಂದ್ಯಾವಳಿ ಜಿಲ್ಲೆಯ ಕ್ರೀಡಾಪಟುಗಳಿಗೆ ದೊರೆತಿರುವ ದೊಡ್ಡ ಗೌರವವಾಗಿದ್ದು, ಇದರ ಯಶಸ್ಸು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

Leave a Reply

Your email address will not be published. Required fields are marked *