ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮಗೆ ಆಸಕ್ತಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಾವು ಪ್ರಧಾನಮಂತ್ರಿಯಾಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ :

ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ ಎಂದು ತಿಳಿಸಿದರು.

You may have missed