ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್.. ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ 

0

ಬೆಂಗಳೂರು: ಬಹಳ ದಿನಗಳ ಬೇಡಿಕೆಯಾಗಿ ಉಳಿದಿದ್ದ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ನಿರ್ಬಂಧಿತವಾಗಿದ್ದ ಅಂತರ್ಜಿಲ್ಲ ವರ್ಗಾವಣೆಗೆ ಅವಕಾಶ ಕೊಡುವ ಒಂದು ಐತಿಹಾಸಿಕ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ, ಮಾನ್ಯ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಸಂಪುಟದ ಮುಂದೆ ಪ್ರಸ್ತಾಪಿಸಿ, ಅನುಮತಿ ಕೋರಿದ್ದರು.ಇಲಾಖೆಯಲ್ಲಿ ಯಾವುದೇ ಒಂದು ಜಿಲ್ಲೆಯಲ್ಲಿ ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಪಡೆಯಲಿದ್ದಾರೆ ಹಾಗೂ ಕೆಲವು ಷರತ್ತುಗಳು ಅನ್ವಯವಾಗುತ್ತವೆ.

ಅದೇ ರೀತಿಯಾಗಿ ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮತಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed