ಏಕೈಕ ‘ತುಳು ಪತ್ರಿಕೆಯ ಧೀರ’ ವಿಜಯಕುಮಾರ್ ಹೆಬ್ಬಾರಬೈಲು ಸಾಧನೆಯ ಕಿರೀಟಕ್ಕೆ ಪ್ರಶಸ್ತಿಯ ಗರಿ.. 

0

‘ಗಡಿನಾಡ ಧ್ವನಿ’ಯಾದ ಏಕೈಕ ‘ತುಳು ಪತ್ರಿಕೆಯ ಧೀರ”ನಿಗೆ ರಾಜ್ಯ ಪ್ರಶಸ್ತಿ.. ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ ಪುರಸ್ಕಾರ..

ಮಂಗಳೂರು: ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ ‘ಪೂವರಿ’ ಪತ್ರಿಕೆಯು ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಪಡೆದುಕೊಂಡಿದೆ. ಪುತ್ತೂರು ಸಮೀಪದ ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ನಡೆದ ಈ ಪ್ರಶಸ್ತಿಯನ್ನು ಸಂಪಾದಕ ವಿಜಯಕುಮಾರ್ ಭಂಡಾರಿ ಹೆಬ್ವಾರಬೈಲು ಅವರಿಗೆ ಪ್ರಧಾನ ಮಾಡಲಾಗಿದೆ.

ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು ಭಾಷೆಯ ಏಕೈಕ ತುಳು ಮಾಸಿಕ ‘ಪೂವರಿ’ ಇತ್ತೀಚೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಒಡಿಯೂರು ತುಳು ಸಾಹಿತ್ಯ ಸಮ್ಮೇಳನದ ಪ್ರಶಸ್ತಿ ಸಹಿತ ಅನೇಕ ಮಾಧ್ಯಮ ಪ್ರಶಸ್ತಿಗಳ ಪಡೆದುಕೊಂಡಿದೆ. ಇದೀಗ ಈ ಸಾಧನೆಗಳ ಕಿರೀಟಕ್ಕೆ ಮತ್ತೊಂದು ಪುರಸ್ಕಾರದ ಗರಿಯ ಆಕರ್ಷಣೆ ಸಿಕ್ಕಿದೆ.

ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ.), ಗಡಿನಾಡ ಧ್ವನಿ ಮಾಸಿಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಯೋಗದಲ್ಲಿ ಆಯೋಜಿತವಾದ ಸಮಾರಂಭದಲ್ಲಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಪ್ರದಾನ ಮಾಡಲಾಯಿತು.

ಸಮ್ಮೇಳನಾಧ್ಯಕ್ಷ ಮಲಾರ್ ಜಯರಾಮ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ, ಸಮ್ಮೇಳನದ ರೂವಾರಿ ಡಾ.ಎಸ್.ಅಬೂಬಕ್ಕರ್ ಆರ್ಲಪದವು, ಕಸಾಪ ಪುತ್ತೂರು ತಾಲೂಕು ಅಧ್ಯಕ್ಷ ಉಮೇಶ್ ನಾಯಕ್, ಡಾ.ಹರ್ಷ ರೈ ಮಾಡಾವು, ಕೆ.ಈಶ್ಯರ ಭಟ್ ಕಡಂದೇಲು ಸಹಿತ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You may have missed