ಸಂಸತ್ ಸದಸ್ಯೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮಾಣವಚನ

0
PRIYANKA GANDHI

ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸತ್ ಸದನ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್​ನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಿಯಾಂಕಾ ಅವರು ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ ವೈಖರಿ ಗಮನಸೆಳೆಯಿತು.

ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು.ಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ.

Leave a Reply

Your email address will not be published. Required fields are marked *

You may have missed