‘ಮೋದಿ’ ಬಗ್ಗೆ ಅವಹೇಳನ ಆರೋಪ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ.. ಕೋರ್ಟ್ ತೀರ್ಪು
ದೆಹಲಿ: ಮೋದಿ ಉಪನಾಮ ಬಗ್ಗೆ ವ್ಯಂಗ್ಯವಾಡಿದ್ದ ಆರೀಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ.
ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ದೂಷಿಸಿದ್ದಾರೆ ಎಂದು ಆರೋಪಿಸಲಾಗಿದೆ. 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಹುಲ್ ನೀಡಿರುವ ಹೇಳಿಕೆ ಕುರಿತಂತೆ ದಾಖಲಾಗಿದ್ದ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ ಗುಜರಾತ್ನ ಸೂರತ್ ನ್ಯಾಯಾಲಯವು ದೋಷಿ ಎಂದು ತೀರ್ಪು ಪ್ರಕಟಿಸಿದೆ.
‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವರಿಷ್ಠರೊಬ್ಬರು ರಾಹುಲ್ ಗಾಂಧಿ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡದ ಶಿಕ್ಷೆಯನ್ನು ಪ್ರಕಟಿಸಿದೆ.
ಇದೇ ವೇಳೆ, ಕಡಿಮೆ ಪ್ರಮಾಣದ ಶಿಕ್ಷೆ ಅದೇ ನ್ಯಾಯಾಲಯದಲ್ಲಿ ಜಾಮೀನು ಪಡೆದು ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಅದರಂತೆ ರಾಹುಲ್ ಗಾಂಧಿಯವರು ಜಾಮೀನು ಪಡೆದು ಶಿಕ್ಷೆಯಿಂದ ಸದ್ಯ ಪಾರಾಗಿದ್ದಾರೆ.