ಕರಾವಳಿ-ಮಲೆನಾಡಿನಲ್ಲಿ ಅ.10ರಿಂದ 3 ದಿನ ಮಳೆ ಸಾಧ್ಯತೆ

Mangalore tollgate - Rain

ಬೆಂಗಳೂರು: ಕರಾವಳಿ-ಮಲೆನಾಡಿನಲ್ಲಿ ಅಕ್ಟೋಬರ್ 10ರಿಂದ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಹಂಚಿಕೊಂಡಿದೆ.

You may have missed