ರಾಜಸ್ತಾನ: 41 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ವಿದ್ಯಮಾನಗಳು ಗರಿಗೆದರಿವೆ.
ಕೇಂದ್ರ ಚುನಾವಣಾ ಆಯೋಗ ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸೋಮವಾರ ವೇಳಾಪಟ್ಟಿ ಪ್ರಕಟಿಸಿದೆ. ಈ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿ ತನ್ನ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ರಾಜಸಮಂದ್ ಸಂಸದೆ ದಿಯಾ ಕುಮಾರಿ ಮತ್ತು ಜೈಪುರ ಗ್ರಾಮಾಂತರ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಸೇರಿದಂತೆ 41 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಬ್ಬರು ಸಂಸದರನ್ನು ಬಿಜೆಪಿ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಪ್ರಕಟಿಸಿರುವುದು ಕುತೂಹಲಕಾರಿ ಸಂಗತಿ