ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: 71 ಸಾಧಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸನ್ಮಾನ

0
Rajyotsava-Award-2026

ಬೆಂಗಳೂರು: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ, ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ 71 ಸಾಧಕರನ್ನು ಗೌರವಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದರು.

“ವಿವಿಧ ಕ್ಷೇತ್ರಗಳಲ್ಲಿ ನೀವು ಮಾಡಿರುವ ನಿಸ್ವಾರ್ಥ ಸಾಧನೆ ಇಡೀ ಕರುನಾಡಿಗೆ ಹೆಮ್ಮೆ ತಂದಿದೆ. ನಾಡಿನ ಹಿರಿಮೆಯನ್ನು ಹೆಚ್ಚಿಸಿದ ನಿಮ್ಮ ಶ್ರಮ ಮುಂದಿನ ಪೀಳಿಗೆಗೆ ದಾರಿದೀಪವಾಗಿದೆ. ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಬೆಳಗುತ್ತಿರುವ ನಿಮ್ಮ ಸಾಧನೆಯ ಹಾದಿ ನಿರಂತರವಾಗಿರಲಿ” ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed