RCB Victory Parade Tragedy - stampede1

ಬೆಂಗಳೂರು: ಐಪಿಎಲ್ ನಲ್ಲಿ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಆದ ಸಂಭ್ರಮ ಒಂದೆಡೆಯಾದರೆ, ಅದೇ ಸಂಭ್ರಮ ಇಡೀ ರಾಜ್ಯವನ್ನು ಸೂತಕದ ಛಾಯೆಗೆ ತಳ್ಳಿದೆ.

ಐಪಿಎಲ್ ಗೆದ್ದ RCB ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ಏವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಏರ್ಪಾಡಾಗಿತ್ತು. ಈ ಸಂಭ್ರಮಾಚರಣೆಯನ್ನು ಸಾಕ್ಷೀಕರಿಸಲು ಭಾರೀ ಸಂಖ್ಯೆಯಲ್ಲಿ RCB ಅಭಿಮಾನಿಗಳು ಜಮಾಯಿಸಿದ್ದರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಆ ವೇಳೆ ಕಾಲ್ತುಳಿತ ಸಂಭವಿಸಿ ಭಾರೀ ಸಾವು-ನೋವು ಉಂಟಾಗಿದೆ. ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಅಸ್ವಸ್ಥರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ, ಕಂಠೀರವ ಕ್ರೀಡಾಂಗಣ ಬಳಿಯ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed