‘ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1’ ಅಭಿನಯಕ್ಕೆ ಸಿಲ್ವರ್ ಪೀಕಾಕ್ ಗೌರವ; 57ನೇ IFFIಯಲ್ಲಿ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ!

0
Rishab-Shetty-Wins-Best-Actor-Award-for-Kantara-A-Legend-Chapter-1-movie-at-57th-IFFI

ಪಣಜಿ: 57ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ‘ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1’ ಚಿತ್ರದ ಅಭಿನಯಕ್ಕಾಗಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅತ್ಯುತ್ತಮ ನಟ (ಪುರುಷ) ವಿಭಾಗದ ಪ್ರತಿಷ್ಠಿತ ‘ಸಿಲ್ವರ್ ಪೀಕಾಕ್’ ಪ್ರಶಸ್ತಿ ಗೆದ್ದಿದ್ದಾರೆ.

ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಚಂಚಲ್ ಕುಮಾರ್ ಹಾಗೂ ಉತ್ಸವ ನಿರ್ದೇಶಕ ಅಶೋಷ್ ಗೋವಾರಿಕರ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ರಿಷಬ್ ಶೆಟ್ಟಿ ಅವರ ತೀವ್ರತೆಯ ಅಭಿನಯ, ದೈಹಿಕ ತೊಡಗಿಸಿಕೊಳ್ಳುವಿಕೆ ಮತ್ತು ವಿಭಿನ್ನ ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಿದ ಸಾಮರ್ಥ್ಯವನ್ನು ಅಂತರರಾಷ್ಟ್ರೀಯ ತೀರ್ಪುಗಾರರ ಮಂಡಳಿ ಶ್ಲಾಘಿಸಿದೆ. ಅವರ ಅಭಿನಯ ಕೇವಲ ನಟನೆಯಾಗಿರದೆ ಒಂದು ಅನುಭವವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

ಪ್ರಶಸ್ತಿಯು ₹15 ಲಕ್ಷ ನಗದು ಬಹುಮಾನ, ಸಿಲ್ವರ್ ಪೀಕಾಕ್ ಟ್ರೋಫಿ ಮತ್ತು ಪ್ರಮಾಣಪತ್ರ ಒಳಗೊಂಡಿದೆ.

ಕದಂಬರ ಕಾಲಘಟ್ಟದ ಹಿನ್ನೆಲೆಯ ಈ ಚಿತ್ರದಲ್ಲಿ ಅರಣ್ಯವಾಸಿ ಬೆರ್ಮೆ, ಬುಡಕಟ್ಟು ಜನರ ಹಕ್ಕು ಮತ್ತು ನ್ಯಾಯಕ್ಕಾಗಿ ನಡೆಸುವ ಹೋರಾಟವನ್ನು ಚಿತ್ರಿಸಲಾಗಿದೆ. ರಾಜಕುಮಾರ ಕುಲಶೇಖರನ ದಬ್ಬಾಳಿಕೆಯನ್ನು ಪ್ರಶ್ನಿಸುವ ಬೆರ್ಮೆಯ ಕಥೆ ಪ್ರೇಕ್ಷಕರ ಗಮನ ಸೆಳೆದಿದೆ.

Leave a Reply

Your email address will not be published. Required fields are marked *