ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

0
dr-sudhakar-300x191

ಬೆಂಗಳೂರು: RCB ಸಂಭ್ರಮಾಚರಣೆ ವೇಳೆ ಸಂಭವಿಸಿರುವ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಭೀಕರ ದುರಂತ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ.

ದುರಂತದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಡಾ.ಸುಧಾಕರ್, ಬೆಂಗಳೂರಿನಲ್ಲಿ ಬುಧವಾರ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಆದೇಶಿಸಿರುವುದು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಅನಾಹುತದಲ್ಲಿ ಬಲಿಯಾದ ಅಮಾಯಕ ಯುವಕರಿಗೆ ನ್ಯಾಯ ಸಿಗಬೇಕಾದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಲೇಬೇಕು. ಇದು ನಮ್ಮ ಆಗ್ರಹ ಎಂದು ಡಾ.ಸುಧಾಕರ್ ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *