ಕಾವೇರಿ ನದಿನೀರು ಹಂಚಿಕೆ; ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ
ಬೆಂಗಳೂರು: ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿದೆ.
ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಕಾವೇರಿ ವಿವಾದ ಕುರಿತ ವಿಚಾರಣೆಗಾಗಿ ಪ್ರತ್ಯೇಕ ಪೀಠ ರಚನೆಗೆ ಸೋಮವಾರ ತೀರ್ಮಾನ ಪ್ರಕಟಿಸಿತ್ತು. ಅದರಂತೆ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಎಸ್.ನರಸಿಂಹ ಮತ್ತು ಬಿ.ಕೆ.ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ರಚನೆ ಮಾಡಿದ್ದಾರೆ. ಈ ತ್ರಿಸದಸ್ಯ ಪೀಠ ಶುಕ್ರವಾರದಿಂದ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.