ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

0
B.Dayanand IPS -

ಬಿ.ದಯಾನಂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತರು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮನಾತಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಅದೇ ಸರ್ಕಾರ ಈ ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದ ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಈ.ಎಸ್.ಐ. ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು.

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಅದರ ಬೆನ್ನಲ್ಲೇ. ಸೋಮವಾರ ​ಐಪಿಎಸ್​ ಅಧಿಕಾರಿಗಳಾದ ಬಿ.ದಯಾನಂದ್​ ಸಹಿತ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ.

Leave a Reply

Your email address will not be published. Required fields are marked *

You may have missed