ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿ; ಮೂವರು ಯುವಕರ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಸಮೀಪ ರೀಲ್ಸ್ ಮಾಡುತ್ತಿದ್ದ ಮೂವರು ಯುವಕರು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಈ ಘಟನೆ ನಡೆದಿದೆ.
ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಲಲನ್ (24 ವರ್ಷ), ಬಿಕೇಶ್ (20 ವರ್ಷ) ಮತ್ತು ರಾಹುಲ್ (18 ವರ್ಷ) ಎಂಬವರು ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ರೀಲ್ಸ್ ಮಾಡುತ್ತಿದ್ದರು ಎನ್ನಲಾಗಿದೆ. ಅದಾಗಲೇ ಆಗಮಿಸಿದ ರೈಲು ಈ ಯುವಕರಿಗೆ ಅಪ್ಪಳಿಸಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಯಶವಂತಪುರ ರೈಲ್ವೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.