ತುಮಕೂರು ಬಳಿ ಭೀಕರ ಅಪಘಾತ: ಮೂವರು ಸಾವು, ಕಾರು ನಜ್ಜುಗುಜ್ಜು

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪಿಇದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನುಹೇಮಂತ್ (28), ಆಕಾಶ್ (20), ಶಿವಕುಮಾರ್ ಎಂದು ಗುರುತಿಸಲಾಗಿದೆ.

ಪ್ರಯಾಣಿಕರಿದ್ದ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

You may have missed