ಕಾರ್ಕಳ ಮಹಾಮಸ್ತಕಾಭಿಷೇಕ ಸಿದ್ಧತೆ: ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಭೆ

0
Karkala-Gomateshwara-Mastakabhisheka-meet

ಉಡುಪಿ: 2027ರ ಫೆಬ್ರವರಿಯಲ್ಲಿ ನಡೆಯಲಿರುವ ಕಾರ್ಕಳದ ಐತಿಹಾಸಿಕ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಸಿದ್ಧತೆಗಳ ಕುರಿತು ಶಾಸಕ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.

ಜಿಲ್ಲಾಡಳಿತ, ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸಿದ್ಧತೆಗಳ ಕುರಿತು ಚರ್ಚಿಸಿದರು.

ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹೋತ್ಸವದ ರೂಪುರೇಷೆಗಳನ್ನು ವಿಸ್ತೃತವಾಗಿ ಪರಿಶೀಲಿಸಲಾಯಿತು. ಮಹೋತ್ಸವದ ಯಶಸ್ಸಿಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯ ಮತ್ತು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವಂತೆ ಶಾಸಕ ಸುನಿಲ್ ಕುಮಾರ್ ಸೂಚಿಸಿದರು.

ಸಭೆಯ ಬಳಿಕ ವಸ್ತುಪ್ರದರ್ಶನದ ಸ್ಥಳ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಹಾಗೂ ಇತರ ಮೂಲಸೌಕರ್ಯಗಳ ಕುರಿತು ಸ್ಥಳ ಪರಿಶೀಲನೆ ನಡೆಸಲಾಯಿತು.

Leave a Reply

Your email address will not be published. Required fields are marked *